ಮಂಡ್ಯ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಂಸದ ಜಿ.ಮಾದೇಗೌಡ ಅವರ ಯೋಗಕ್ಷೇಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿಚಾರಿಸಿದರು.
ಜಿ.ಮಾದೇಗೌಡರ ಯೋಗಕ್ಷೇಮ ವಿಚಾರಿಸಿದ ಆದಿಚುಂಚನಗಿರಿ ಶ್ರೀ, ಡಿಸಿಎಂ - ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
ಜಿಲ್ಲೆಯ ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು ಹಾಗು ಡಿಸಿಎಂ ಚಿಕಿತ್ಸೆ ಮಾದೇಗೌಡರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
![ಜಿ.ಮಾದೇಗೌಡರ ಯೋಗಕ್ಷೇಮ ವಿಚಾರಿಸಿದ ಆದಿಚುಂಚನಗಿರಿ ಶ್ರೀ, ಡಿಸಿಎಂ Swamiji of Adichunchanagiri Math inquired about the well-being of G. Madhagowda](https://etvbharatimages.akamaized.net/etvbharat/prod-images/768-512-12387538-757-12387538-1625669287583.jpg)
ಜಿ.ಮಾದೇಗೌಡ ಅವರ ಯೋಗಕ್ಷೇಮ ವಿಚಾರಿಸಿದ ಆದಿಚುಂಚನಗಿರಿ ಮಠ ಸ್ವಾಮೀಜಿ ಮತ್ತು ಡಿಸಿಎಂ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿ.ಮಾದೇಗೌಡ
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉಪಮುಖ್ಯಮಂತ್ರಿ, ಓರ್ವ ಹೋರಾಟಗಾರ, ಸಂಸದ ಹಾಗೂ ರಾಜಕೀಯ ನಾಯಕರಾಗಿ ಮಾದೇಗೌಡರು ಮಂಡ್ಯ ಮಾತ್ರವಲ್ಲದೆ, ಇಡೀ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಆರೋಗ್ಯ ಸುಧಾರಿಸಿ ಬೇಗ ಅವರು ಮನೆಗೆ ಮರಳಲಿ ಎಂದು ಹಾರೈಸಿದರು.