ಕರ್ನಾಟಕ

karnataka

ETV Bharat / state

ಕುಮಾರಸ್ವಾಮಿ ಹೇಳಿದ್ದನ್ನು ಮಾಡಕ್ಕಲ್ಲ ನಾವಿರೋದು: ಕೃಷಿ ಸಚಿವ ಚಲುವರಾಯಸ್ವಾಮಿ

ನಾವು ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇವೆ ಎನ್ನುತ್ತಾ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು ಕೊಟ್ಟರು.

ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ

By ETV Bharat Karnataka Team

Published : Aug 28, 2023, 9:52 PM IST

ಸಚಿವ ಎನ್. ಚಲುವರಾಯಸ್ವಾಮಿ ಪ್ರತಿಕ್ರಿಯೆ

ಮಂಡ್ಯ : ರೈತರಿಗಾಗಿ 6ನೇ ಗ್ಯಾರಂಟಿ ಘೋಷಣೆ ಮಾಡಿ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಹೇಳಿದ್ದನ್ನು ಮಾಡಲಿಕ್ಕಲ್ಲ ನಾವಿರೋದು ಎಂದು ಖಾರವಾಗಿ ಹೇಳಿದ್ದಾರೆ.

ಮಂಡ್ಯದಲ್ಲಿಂದು ನಡೆದ ರಾಜ್ಯ ಮಟ್ಟದ ಸಿರಿಧಾನ್ಯ ಮೇಳದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ 2018ರಲ್ಲಿ ಸಿಎಂ ಆದಾಗ ಹಲವು ಯೋಜನೆಗಳನ್ನು ಕೊಟ್ಟಿದ್ದರು. ಹೀಗಾಗಿ ಅವರ ಮಾತನ್ನು ನಾವು ಕೇಳಬೇಕಿದೆ. ನಾವೇನು ಭರವಸೆ ಕೊಟ್ಟಿದ್ದೇವೋ ಅದನ್ನು ಮಾಡುತ್ತೇವೆ. ಆದರೆ ಕುಮಾರಸ್ವಾಮಿ, ಬಿಜೆಪಿಯವರು ಹೇಳಿದ್ದನ್ನು ಮಾಡಲಿಕ್ಕೆ ನಾವಿಲ್ಲ ಎಂದು ತಿರುಗೇಟು ನೀಡಿದರು.

ಕರ್ನಾಟಕದಲ್ಲಿ ಜೂನ್​ ತಿಂಗಳಲ್ಲಿ ಮುಂಗಾರು ಮಳೆ ಬರೋದು ವಿಳಂಬವಾಗಿತ್ತು. ಹಾಗಾಗಿ ಅಲ್ಪ ಸ್ವಲ್ಪ ಮಳೆಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯು ಸಾಮಾನ್ಯ ಪ್ರಮಾಣಕ್ಕಿಂತ ಶೇ. 3ರಷ್ಟು ಹೆಚ್ಚುವರಿಯಾಗಿ ಸುರಿದಿತ್ತು. ಅದರಲ್ಲಿಯೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗಿದ್ದು ಜನರು, ರೈತರು ಸಂತಸಗೊಂಡಿದ್ದರು. ಆಗಸ್ಟ್​ ತಿಂಗಳಲ್ಲಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಬಿಸಿಲಿನ ಬೇಗೆಗೆ ಜನರು ಕಂಗಾಲಾಗಿದ್ದಾರೆ ಎಂದರು.

ಇವೆಲ್ಲದರ ಮಧ್ಯೆ ಮೋಡಬಿತ್ತನೆ ಎಂಬ ಮಾತು ಸಹ ಕೇಳಿಬರುತ್ತಿದ್ದು, ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಸೂಕ್ತ ಪ್ರತಿಫಲ ಸಿಕ್ಕಿಲ್ಲ. ಆಗಸ್ಟ್​ 30ರೊಳಗೆ ಹಳ್ಳಿಗಳನ್ನು ವೀಕ್ಷಣೆ ಮಾಡಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಸೆಪ್ಟೆಂಬರ್​​ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ. ಸದ್ಯಕ್ಕೆ ಮೋಡ ಬಿತ್ತನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ. ನಾವು 136 ಸ್ಥಾನ ಗೆದ್ದಿದ್ದೇವೆ. ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಂದರೆ ಕರೆದುಕೊಳ್ಳುತ್ತೇವೆ. ನಾವು ಯಾರ ಮನೆ ಬಾಗಿಲನ್ನೂ ತಟ್ಟಿಲ್ಲ. ಮಂಡ್ಯ ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಪಕ್ಷಕ್ಕೆ ಬರಬಹುದು ಎಂದರು.

ನಾವು ಕೊಟ್ಟ ಮಾತಿನಂತೆ ಈಗಾಗಲೇ 4 ಗ್ಯಾರಂಟಿ ಜಾರಿಗೊಳಿಸಿದ್ದೇವೆ. 2-3 ದಿನಗಳಲ್ಲಿ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ ಹೋಗುತ್ತದೆ. ಆ.1ರಂದೇ 5 ಲಕ್ಷ ರೂ. ಬಡ್ಡಿರಹಿತ ಸಾಲ ಕೊಡುವ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ :Cauvery water issue: ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರ ಆಗಬೇಕು ಎಂಬುದು ನಮ್ಮ ಬೇಡಿಕೆ: ಸಚಿವ ಹೆಚ್ ಕೆ ಪಾಟೀಲ್

ABOUT THE AUTHOR

...view details