ಮಂಡ್ಯ.. ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ರೀತಿ ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯ ಸರ್ವೇ ಮತ್ತು ಪರಿಶೀಲನೆ ನಡೆಸಬೇಕು. ಹಿಂದೂ ದೇವಾಲಯದ ಕುರುಹುಗಳಿರುವ ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಬೇಕು ಎಂದು ನರೇಂದ್ರ ವಿಚಾರ ಮಂಚ್ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿದಿದ್ರೆ ಜ್ಞಾನವಾಪಿ ಪ್ರಕರಣ ರೀತಿ ಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ ನೀಡಿದ್ದಾರೆ.
ಮಸೀದಿಯಲ್ಲ ದೇವಾಲಯ: ಜಿಲ್ಲಾಧಿಕಾರಿ ಎಸ್ ಅಶ್ವಥಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಹಿಂದೂ ಸಂಘಟನೆಯ ಕಾರ್ಯಕರ್ತರು, ಮಸೀದಿ ಕುರಿತು ಒಂದಷ್ಟು ಅಂಶಗಳನ್ನ ಉಲ್ಲೇಖಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟದ ಜಾಮಿಯಾ ಮಸೀದಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ ಆರೋಪಿಸಿದ್ದಾರೆ. ಟಿಪ್ಪು ಸುಲ್ತಾನ್ ಆಡಳಿತ ಅವಧಿಯಲ್ಲಿ ದೇವಾಲಯ ಕೆಡವಿ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ದೇವಾಲಯದ ಕುರುಹುಗಳು ಅಲ್ಲಿ ಈಗಲೂ ಇವೆ. ಕೊಳ, ದೇವರ ಕೆತ್ತನೆಗಳು ಕಣ್ಣಿಗೆ ಕಾಣಿಸುತ್ತವೆ. ಹೀಗಾಗಿ ಮಸೀದಿಯನ್ನು ತೆರವುಗೊಳಿಸಿ ಮತ್ತೆ ಮೂಡಲಬಾಗಿಲು ಆಂಜನೇಯ ಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಬೇಕು ಒತ್ತಾಯಿಸಿದ್ದಾರೆ.