ಮಂಡ್ಯ: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂದಾಖಲೆಗಳ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ವಿಜಯಾ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಇಲಾಖೆಯಲ್ಲಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ ಮಹದೇವಸ್ವಾಮಿ ಎಂಬುವವರು ಸಲ್ಲಿಸಿದ್ದ ದೂರಿನನ್ವಯ, 25 ಸಾವಿರ ಲಂಚ ಸ್ವೀಕರಿಸುವ ಸಮಯದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಹೊರಗುತ್ತಿಗೆ ಸರ್ವೇಯರ್‌ಗಳ ಗುತ್ತಿಗೆ ಅವಧಿ ಮುಂದುವರಿಸುವುದಕ್ಕಾಗಿ, ವಿಜಯಾ ಅವರು ಪ್ರತಿ ಅಭ್ಯರ್ಥಿಯಿಂದ 30 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಮಹದೇವಸ್ವಾಮಿ ದೂರು ನೀಡಿದ್ದರು. ಲಂಚದ ಹಣವನ್ನು ವಶಕ್ಕೆ ಪಡೆದ ಪೊಲೀಸರು ಅಧಿಕಾರಿಯನ್ನು ಬಂಧಿಸಿದ್ದು, ನಗರದ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.