ಮಂಡ್ಯ: ತಾಲೂಕಿನ ಕಾಗೆಹಳ್ಳದ ದೊಡ್ಡಿ ಗ್ರಾಮದಲ್ಲಿ ಕೆಲಸದ ಒತ್ತಡ ಹಾಗೂ ವರ್ಗಾವಣೆಗೆ ಬೇಸತ್ತು ಅಂಗನವಾಡಿ ಕಾರ್ಯಕರ್ತೆ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭಾಗ್ಯಮ್ಮರನ್ನು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಹೇಳಿ ವರ್ಗಾವಣೆ ಮಾಡಲಾಗಿತ್ತು.
ವಿಷ ಸೇವಿಸಿ ಸಾವಿಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ ಹೀಗಾಗಿ ಭಾಗ್ಯಮ್ಮ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರ ಆತ್ಮಹತ್ಯೆ ಯತ್ನಕ್ಕೆ ಅಧಿಕಾರಿಗಳೇ ಕಾರಣ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದು, ಮುಂದೆ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ನಕಲಿ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಒತ್ತಡ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.
ಸದ್ಯ ಚಿಕಿತ್ಸೆ ಪಡೆಯುತ್ತಿರುವ ಭಾಗ್ಯಮ್ಮ ಸ್ಥಿತಿ ಚಿಂತಾಜನಕವಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.