ಮಂಡ್ಯ: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದನ್ನ ಕೈಬಿಟ್ಟು ಅಂಗನವಾಡಿಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನೆಡೆಸಿದರು.
ಅಂಗನವಾಡಿ ಬಲಪಡಿಸಲು ಆಗ್ರಹಿಸಿ ಕಾರ್ಯಕರ್ತೆಯರ ಪ್ರತಿಭಟನೆ - undefined
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಬೇಕೆಂಬ ನಿರ್ಧಾರವನ್ನು ಸರ್ಕಾರ ಕೈಬಿಟ್ಟು ಅಂಗನವಾಡಿ ಬಲಪಡಿಸುವಂತೆ ಆಗ್ರಹಿಸಿ ಬೃಹತ್ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
![ಅಂಗನವಾಡಿ ಬಲಪಡಿಸಲು ಆಗ್ರಹಿಸಿ ಕಾರ್ಯಕರ್ತೆಯರ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-3593857-thumbnail-3x2-mnd.jpg)
ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ
ಸರ್ಕಾರದ ಆದೇಶ ವಿರೋಧಿಸಿ ವಿಧಾನಸೌಧ ಚಲೋ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು, ಆದರೂ ಸಹ ಆದೇಶವನ್ನು ರದ್ದುಪಡಿಸಲಿಲ್ಲ ಎಂದು ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತಯರು ಧಿಕ್ಕಾರ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದನ್ನ ತಕ್ಷಣ ಕೈಬಿಡಬೇಕು ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.