ಮಂಡ್ಯ: ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕೆ.ಆರ್. ಪೇಟೆ ಸಬ್ಇನ್ಸ್ಪೆಕ್ಟರ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಪ್ರಕರಣ ಸಂಬಂಧ ಮಾಜಿ ಶಾಸಕರ ಸಹೋದರನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾರೆ.
ಎಸ್ಐ ಕರ್ತವ್ಯಕ್ಕೆ ಅಡ್ಡಿ: ಮಾಜಿ ಶಾಸಕರ ಸಹೋದರ ಅಂದರ್, ಮತ್ತೋರ್ವನಿಗೆ ಹುಡುಕಾಟ
ಎಸ್ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೆ ಆರ್ ಪೇಟೆ ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಬಿ. ಈಶ್ವರಪ್ರಸಾದ್ರನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಕೆ.ಬಿ. ರವಿ ತಲೆಮರೆಸಿಕೊಂಡಿದ್ದಾರೆ.
ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಬಿ. ಈಶ್ವರಪ್ರಸಾದ್ ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಕೆ.ಬಿ. ರವಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತ ಈಶ್ವರ್ ಪ್ರಸಾದ್ ಹಾಗೂ ರವಿ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರರಾಗಿದ್ದಾರೆ. ವರ್ಷಾಚರಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪಿಎಸ್ಐ ಬ್ಯಾಟರಾಯಗೌಡ ಅವರು ದೂರು ದಾಖಲಿಸಿಕೊಂಡಿದ್ದರು. ಪ್ರಕರಣ ಹಿನ್ನೆಲೆ ಇಬ್ಬರೂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಈಶ್ವರ್ ಪ್ರಸಾದ್ರನ್ನು ಒಪ್ಪಿಸಲಾಗಿದೆ.