ಮಂಡ್ಯ :ಕೊರೊನಾ ವಾರಿಯರ್ಸ್ ಆದ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಸಹಕಾರ ಇಲಾಖೆ ಮುಂದಾಗಿದೆ. ಶೀಘ್ರವಾಗಿ ಪ್ರಕಟ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಘೋಷಣೆ ಮಾಡಿದರು.
ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ.. ಎಸ್ ಟಿ ಸೋಮಶೇಖರ್ - Minister S.T. Somashekhar
ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂಪಾಯಿ ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಎಸ್.ಟಿ. ಸೋಮಶೇಖರ್ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಸಹಕಾರ ಇಲಾಖೆ ಮುಂದಾಗಿದ್ದು, ಶೀಘ್ರವಾಗಿ ಪ್ರಕಟ ಮಾಡಲಾಗುವುದು..
ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮ
ನಗರದ ರೈತ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂಪಾಯಿ ಪ್ರೋತ್ಸಾಹ ಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಭೆಯಲ್ಲಿಯೇ ಘೋಷಣೆ ಮಾಡಿದರು. ಹಲವು ಸಚಿವರು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಶೀಘ್ರ ಸಾಲದ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹದ ಚೆಕ್ ವಿತರಣೆ ಮಾಡಿದರು. ಇದಕ್ಕೂ ಮೊದಲು ಸಚಿವ ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಶ್ ಆಶಾ ಕಾರ್ಯಕರ್ತೆಯರ ಕಾರ್ಯವನ್ನು ಶ್ಲಾಘಿಸಿದರು.