ಕರ್ನಾಟಕ

karnataka

ETV Bharat / state

ಮಂಡ್ಯ: ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ... ವಿಡಿಯೋ - Attack on Anganwadi activist

ಅಂಗನವಾಡಿ ಕಾರ್ಯಕರ್ತೆ ಚಿಕ್ಕಮ್ಮ ಎಂಬುವರು ಮಕ್ಕಳಿಗೆ ತಿಂಗಳ ಪೌಷ್ಟಿಕ ಆಹಾರಗಳನ್ನು ನೀಡಲು ತೆರಳಿದ್ದಾಗ ಅವರ ಮೇಲೆ ಗ್ರಾಮದ ಕೆಲವರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

Attack on Anganwadi activist in mandya
ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ಆರೋಪ; ವಿಡಿಯೋ!

By

Published : May 28, 2021, 10:02 AM IST

ಮಂಡ್ಯ:ಮದ್ದೂರು ತಾಲೂಕಿನ ಕೊಪ್ಪ ಸಮೀಪದ ಕಿರಂಗೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಗ್ರಾಮದ ಕೆಲವರು ಹಲ್ಲೆ ಮಾಡಿದ ಘಟನೆ ನಡೆದಿದೆ‌.

ಕಿರಂಗೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಚಿಕ್ಕಮ್ಮ ಎಂಬುವರು ಮಕ್ಕಳಿಗೆ ತಿಂಗಳ ಪೌಷ್ಟಿಕ ಆಹಾರಗಳನ್ನು ನೀಡಲು ತೆರಳಿದ್ದಾಗ ಈ ಘಟನೆ ನಡೆದಿದೆ. ಕಿರಂಗೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಚಿಕ್ಕಮ್ಮ ತಮ್ಮ ಮೇಲೆ ಅದೇ ಗ್ರಾಮದ ದೇವರಾಜು, ಉಮೇಶ್, ಮರಿಸ್ವಾಮಿ, ಭಾಗ್ಯಮ್ಮ, ರವಿಕುಮಾರ್ ಎಂಬುವವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ದೂರಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಚಿಕ್ಕಮ್ಮ ಮತ್ತು ಗ್ರಾಮದ ಕೆಲವರ ನಡುವೆ ಗಲಾಟೆ

ಕಾರ್ಯಕರ್ತೆ ಮೇಲೆ ವೈಯಕ್ತಿಕ ದ್ವೇಷ ಸಾಧಿಸಲು ಮುಂದಾಗಿದ್ದ ಇವರು ಪೌಷ್ಟಿಕ ಆಹಾರ ನೀಡುವಲ್ಲಿ ಲೋಪವೆಸಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಚಿಕ್ಕಮ್ಮ ಮತ್ತು ದೇವರಾಜು ಗುಂಪಿನ ನಡುವೆ ಗಲಾಟೆ ಆಗಿ, ದೇವರಾಜು ಗುಂಪು ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಮಹಿಳೆಗೆ ಗಂಭೀರ ಗಾಯ

ಹಲ್ಲೆ ಬಳಿಕ ಆರೋಪಿಗಳು ಗ್ರಾಮದಿಂದ ತಲೆಮರೆಸಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details