ಮಂಡ್ಯ: ಗ್ರಾಮ ಪಂಚಾಯಿತಿ ಅಭ್ಯರ್ಥಿ ಮೇಲೆ ಇಬ್ಬರು ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೋಲಿಂಗ್ ಬೂತ್ ಬಳಿ ಅಭ್ಯರ್ಥಿ ತಮ್ಮಣ್ಣ ಎಂಬವರ ಮೇಲೆ ಎಸ್.ಆರ್.ಲೋಕೇಶ್ ಮತ್ತು ನಂಜೇಗೌಡ ಹಲ್ಲೆ ನಡೆಸಿ ಕಲ್ಲಿನಿಂದ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.