ಕರ್ನಾಟಕ

karnataka

ETV Bharat / state

ಟ್ರ್ಯಾಕ್ಟರ್ ಟ್ರಾಲಿಗೆ ಆಟೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - mandya crime news

ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯದ ಕೀಲಾರ ಗ್ರಾಮದ ಬಳಿ ನಡೆದಿದೆ‌.

mandya
ಟ್ರ್ಯಾಕ್ಟರ್ ಟ್ರಾಲಿಗೆ ಆಟೋ ಡಿಕ್ಕಿ

By

Published : Dec 15, 2020, 7:35 PM IST

ಮಂಡ್ಯ: ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಪ್ರಯಾಣಿಕರ ಆಟೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದ ಕೀಲಾರ ಗ್ರಾಮದ ಬಳಿ ನಡೆದಿದೆ‌.

ಟ್ರ್ಯಾಕ್ಟರ್ ಟ್ರಾಲಿಗೆ ಆಟೋ ಡಿಕ್ಕಿ

ಈಚಗೆರೆ ಗ್ರಾಮದ ಚಂದ್ರಶೇಖರ್ (48) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಈತ ಮಂಡ್ಯದ ತರಕಾರಿ ಮಾರುಕಟ್ಟೆಯಲ್ಲಿ ಸೊಪ್ಪು ಮಾರುತ್ತಿದ್ದ. ಹೀಗಾಗಿ ಇಂದು ಎಂದಿನಂತೆ ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಯಾಣಿಕರ ಆಟೋ ಮೂಲಕ ಮಂಡ್ಯಕ್ಕೆ ಹೊರಟಿದ್ದ. ಆದ್ರೆ ಮಾರ್ಗ ಮಧ್ಯೆ ಕೀಲಾರ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಆಟೋ ಡಿಕ್ಕಿ ಹೊಡೆದಿದೆ.

ಈ ಸಂದರ್ಭ ಚಂದ್ರಶೇಖರ್ ತಲೆಗೆ ಪೆಟ್ಟು ಬಿದ್ದಿದ್ದು, ಅತಿಯಾದ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಈ ಬಗ್ಗೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಚಂದ್ರಶೇಖರ್ ಮೃತದೇಹವನ್ನು ಮಂಡ್ಯ ಮಿಮ್ಸ್ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ABOUT THE AUTHOR

...view details