ಮಂಡ್ಯ:ಗಾರ್ಮೆಂಟ್ಸ್‌ಗೆ ಮಹಿಳಾ ನೌಕರರನ್ನು ಕರೆದೊಯ್ಯುತ್ತಿದ್ದ ಆಟೋವೊಂದು ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಗಾರ್ಮೆಂಟ್ಸ್‌ಗೆ ಮಹಿಳಾ ನೌಕರರನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ - ಆಟೋ ಪಲ್ಟಿ
ಸೋಮನಹಳ್ಳಿಯಲ್ಲಿರುವ ಗಾರ್ಮೆಂಟ್ಸ್‌ಗೆ ಮಹಿಳಾ ನೌಕಕರನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ ಸುಮಾರು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
Auto overturn in Mandya
ಸೋಮನಹಳ್ಳಿಯಲ್ಲಿರುವ ಗಾರ್ಮೆಂಟ್ಸ್‌ಗೆ ಮದ್ದೂರು ತಾಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಸಿಬ್ಬಂದಿ ಕೆಲಸಕ್ಕೆಂದು ತೆರಳುತ್ತಾರೆ. ಎಂದಿನಂತೆ ಇಂದು ಕೂಡ ಮಹಿಳಾ ನೌಕಕರು ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ಆಟೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಜಮೀನಿನಲ್ಲಿ ಪಲ್ಟಿಯಾಗಿದೆ. ಪರಿಣಾಮ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.