ಮಂಡ್ಯ: ಜಿಲ್ಲೆಯ ಗ್ರಾಮಸ್ಥರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ಕುಮಾರ್ ಅವರ ವಾಟ್ಸ್ಆಪ್ ನಂಬರ್‌ಗೆ ಶಾಲೆಯ ಸಮಸ್ಯೆ ಬಗ್ಗೆ ಮಾಹಿತಿ ಹಾಕಿದ ಹಿನ್ನೆಲೆಯಲ್ಲಿ, ಇಂದು ದಿಡೀರ್ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಕೆಲ ಕಾಲ ಕಳೆದು ಬಳಿಕ ಅಧಿಕಾರಿಗಳಿಂದ ಶಾಲೆಯ ಕುರಿತು ಮಾಹಿತಿ ಸಂಗ್ರಹಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಬ್ಯಾಗ್ ರಹಿತ ದಿನ : ಮಕ್ಕಳಿಗೆ ಸಿಗಲಿದೆ ಮನರಂಜನೆ - sureshkumar visits mandya
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಇಂದು ಮಂಡ್ಯ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಧಿಕಾರಿಗಳಿಂದ ಶಾಲೆಯ ಕುರಿತು ಮಾಹಿತಿ ಸಂಗ್ರಹಿಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜೊತೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತ ದಿನ ಆಚರಣೆ ಮಾಡಲು ಯೋಜನೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಚಾಮರಾಜನಗರಕ್ಕೆ ಹೋಗುವ ಮಾರ್ಗಮಧ್ಯೆ ಗುರುದೇವರಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ ಕಲೆ ಹಾಕಿದರು. ಶಾಲೆಯ ಜಮೀನಿನ ಬಗ್ಗೆ ಗೊಂದಲವಿದ್ದು, ಶಾಲೆ ನಿರ್ಮಾಣ ಮಾಡಿರುವ ಜಾಗ ತಮ್ಮದೆಂದು ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಜೊತೆಗೆ ಮೂಲಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಚಿವರ ಗಮನ ಸೆಳೆದಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಸಚಿವರು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮುಂದಿನ ವರ್ಷದಿಂದ ಬ್ಯಾಗ್ ರಹಿತ ದಿನ:ವಾರದಲ್ಲಿ ಒಂದು ದಿನ ಬ್ಯಾಗ್ ರಹಿತ ದಿನ ಆಚರಣೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಮಕ್ಕಳಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಕಾರ್ಯಕ್ರಮ ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲರ ಜೊತೆ ಚರ್ಚಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಯೋಜನೆ ಜಾರಿಗೊಳಿಸಲಾಗುವುದೆಂದು ಸಚಿವರು ತಿಳಿಸಿದರು.