ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಭಾರತ್ ಜೋಡೋ: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ - ಭಾರತ್ ಜೋಡೋ ಯಾತ್ರೆ

ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು.

ಮಂಡ್ಯದಲ್ಲಿ ಭಾರತ್ ಜೋಡೋ
ಮಂಡ್ಯದಲ್ಲಿ ಭಾರತ್ ಜೋಡೋ

By

Published : Oct 6, 2022, 9:45 AM IST

Updated : Oct 6, 2022, 9:58 AM IST

ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ.

ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ:ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು. ಇದರಿಂದ ಪಾದಯಾತ್ರೆಗೆ ಸೋನಿಯಾ ಗಾಂಧಿ ಬಲ ತುಂಬಿದರು. ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

(ಓದಿ: ನಾಗರಹೊಳೆಯಲ್ಲಿ ಗಾಯಗೊಂಡ ಆನೆ ಮರಿ ಕಂಡ ರಾಹುಲ್​: ಚಿಕಿತ್ಸೆ ಕೊಡಿಸುವಂತೆ ಸಿಎಂಗೆ ಪತ್ರ)

ಬೆಳಗ್ಗೆ 11 ಗಂಟೆವರೆಗೆ ಪಾದಯಾತ್ರೆ ಮಾಡಿ ಬಳಿಕ ಖಾರಾದ್ಯ ಕೆರೆ ಬಳಿ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಖಾರಾದ್ಯ ಕೆರೆಯಿಂದ ಆರಂಭವಾಗುವ ಪಾದಯಾತ್ರೆ ಸಂಜೆ 7 ಗಂಟೆಗೆ ಮಂಡ್ಯದ ಬ್ರಹ್ಮದೇವರ ಹಳ್ಳಿ ಗ್ರಾಮ ತಲುಪಲಿದೆ.

ಅಕ್ಟೋಬರ್​ 3ರಂದು ಮೈಸೂರಿಗೆ ಬಂದಿರುವ ಸೋನಿಯಾ ಗಾಂಧಿ ಅವರು ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ರು. ಇಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ನಾಳೆ (ಶುಕ್ರವಾರ) ನಾಗಮಂಗಲದಲ್ಲಿ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸುವ ಸಾಧ್ಯತೆ ಇದೆ.

(ಓದಿ: ಮೈಸೂರು: ಸುರಿಯುತ್ತಿದ್ದ ಮಳೆಯಲ್ಲೇ ರಾಹುಲ್​ ಗಾಂಧಿ ಭಾಷಣ)

Last Updated : Oct 6, 2022, 9:58 AM IST

ABOUT THE AUTHOR

...view details