ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದ ಬಳಿ ನಡೆದಿದೆ. ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿತು. ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಯುವತಿಯರಿಬ್ಬರು ಸಾವನ್ನಪ್ಪಿದ್ದಾರೆ.
ಮದ್ದೂರು ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಇಬ್ಬರು ಯುವತಿಯರು ಸಾವು - ಮದ್ದೂರು ಬಳಿ ಅಪಘಾತದಲ್ಲಿ ಇಬ್ಬರು ಸಾವು
ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ.
ಮದ್ದೂರು ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ
ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆ.ಎಂ.ದೊಡ್ಡಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರ ಹಾಗೂ ಯುವತಿಯರ ಹೆಸರು ಇನ್ನಷ್ಟೇ ತಿಳಿಯಬೇಕಿದೆ.
ಇದನ್ನೂ ಓದಿ: ಮಂಗಳೂರು: ನೀರಿನಲ್ಲಿ ಡೈವ್ ಹೊಡೆಯುವಂತೆ ಲಾರಿಯಡಿಗೆ ಜಿಗಿದ ಯುವಕ! ವಿಡಿಯೋ