ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಕಡಿತಗೊಂಡ ಬಿಎಸ್ಎನ್ಎಲ್ ಸಂಪರ್ಕ; ಹೈರಾಣಾದ ಜನ - mandya

ಬಿಎಸ್ಎನ್ಎಲ್ ಸಂಪರ್ಕ ಕಡಿತದಿಂದ ಮಳವಳ್ಳಿ ತಾಲ್ಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿವೆ. ಸುಮಾರು 4 ದಿನಗಳಿಂದ ಗ್ರಾಹಕರು ತೊಂದರೆಗೆ ಒಳಗಾಗಿದ್ದಾರೆ.

ಬಿಎಸ್ಎನ್ಎಲ್ ಸಂಪರ್ಕ ಕಡಿತ

By

Published : Sep 11, 2019, 8:58 PM IST

ಮಂಡ್ಯ:ಬಿಎಸ್ಎನ್ಎಲ್ ಸಂಪರ್ಕ ಕಡಿತಗೊಂಡ ಕಾರಣ ಮಳವಳ್ಳಿ ತಾಲ್ಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿವೆ.

ಮಂಡ್ಯದಲ್ಲಿ ಬಿಎಸ್ಎನ್ಎಲ್ ಸಂಪರ್ಕ ಕಡಿತ, ಜನತೆಗೆ ತೊಂದರೆ

ನೆಟ್​ವರ್ಕ್ ಸೇವೆ ಸ್ಥಗಿತಗೊಂಡ ಪರಿಣಾಮ ಗ್ರಾಹಕರಿಗೆ ಯಾವುದೇ ಕರೆಗಳು ಬರುತ್ತಿಲ್ಲ. ಬ್ಯಾಂಕಿಂಗ್ ಸೇವೆ ಸ್ಥಗಿತಗೊಂಡಿದೆ. ರೈತರಿಗೆ ಪಹಣಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ನೆಟ್​ವರ್ಕ್ ಸಂಬಂಧ ಬಿಎಸ್ಎನ್ಎಲ್ ಸಿಬ್ಬಂದಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ನೆಟ್​ವರ್ಕ್ ಸಮಸ್ಯೆ ಪರಿಹಾರಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಗ್ರಾಹಕರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮ ಪಂಚಾಯಿತಿ ಸೇರಿದಂತೆ ಬ್ಯಾಂಕ್, ನೆಮ್ಮದಿ ಕೇಂದ್ರಗಳು ಬಾಗಿಲು ಮುಚ್ಚಿದ್ದು ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ABOUT THE AUTHOR

...view details