ಕರ್ನಾಟಕ

karnataka

ETV Bharat / state

ಬೈ ಎಲೆಕ್ಷನ್‌ನಲ್ಲಿ ಸುಮಲತಾ ಬೆಂಬಲಿಸೋದು ಬಿಡೋದು ಅವರಿಗೇ ಬಿಟ್ಟಿದ್ದು.. ಡಿಸಿಎಂ ಅಶ್ವತ್ಥ್‌ ನಾರಾಯಣ.. - HD Chaudhayya Foundation Award Ceremony

ಲೋಕ ಸಮರದಲ್ಲಿ ಸುಮಲತಾ ಅಂಬರೀಶ್ ಗೆಲುವಿಗೆ ಬಿಜೆಪಿ ಕೊಡುಗೆಯೂ ಇದೆ. ಆದರೆ, ಉಪ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ ಎಂದು ಡಿಸಿಎಂ ಡಾ. ಅಶ್ವತ್ಥ್‌ ನಾರಾಯಣ್ ಹೇಳಿದ್ದಾರೆ.

ಡಾ. ಅಶ್ವಥ್ ನಾರಾಯಣ್

By

Published : Sep 25, 2019, 6:40 PM IST

ಮಂಡ್ಯ: ಲೋಕ ಸಮರದಲ್ಲಿ ಸುಮಲತಾ ಅಂಬರೀಶ್ ಗೆಲುವಿಗೆ ಬಿಜೆಪಿ ಕೊಡುಗೆಯೂ ಇದೆ. ಆದರೆ, ಉಪ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೇ ಬಿಟ್ಟ ವಿಚಾರ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್‌ ನಾರಾಯಣ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಾ. ಅಶ್ವತ್ಥ್‌ ನಾರಾಯಣ್..

ಮಂಡ್ಯದ ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಹೆಚ್‌ ಡಿ ಚೌಡಯ್ಯ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಾಧಕರಿಗೆ ಪ್ರಶಸ್ತಿ ನೀಡಿ‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಸುಪ್ರೀಂಕೋರ್ಟ್ ತೀರ್ಮಾನ ಹೊರ ಬಿದ್ದ ನಂತರ ಟಿಕೇಟ್ ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದರು.

ಕೆಆರ್‌ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಆ ರೀತಿ ಯಾವುದೇ ಬೆಳವಣಿಗೆ ಹಾಗೂ ತೀರ್ಮಾನ ನಡೆದೇ ಇಲ್ಲ ಎಂದರು.

ABOUT THE AUTHOR

...view details