ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಬಳಿ ಇರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರ ಗದ್ದುಗೆ ಮತ್ತು ಕಲ್ಲಹಳ್ಳಿಯ ಭೂವರಹನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಿಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಕಲ್ಲಹಳ್ಳಿಯ ಭೂವರಹನಾಥ ಸ್ವಾಮಿಗೆ ತಂದೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ ಅವರು, ಅಲ್ಲಿಂದ ಬಯಲು ಸೀಮೆ ಸುಬ್ರಹ್ಮಣ್ಯ ದೇವಸ್ಥಾನ ಎಂದೇ ಪ್ರಖ್ಯಾತವಾದ ಸಾಸಲು ಗ್ರಾಮದ ಸೋಮೇಶ್ವರ - ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.