ಮಂಡ್ಯ: ಸರ್ಕಾರದ ಆದೇಶವನ್ನು ಗಾಳಿಗೆ ತೂರಿ 1 ರಿಂದ 6ನೇ ತರಗತಿ ಮಕ್ಕಳಿಗೆ ತರಗತಿ ಪ್ರಾಂಭಿಸಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ.
ಸರ್ಕಾರದ ಆದೇಶ ಮೀರಿ ಶಾಲಾ ತರಗತಿ ಪ್ರಾರಂಭ: ಫೀಸ್ ಕಟ್ಟದ ಮಕ್ಕಳನ್ನು ಹೊರಗೆ ನಿಲ್ಲಿಸಿದ ಶಾಲಾ ಮಂಡಳಿ - ಫೀಜ್
ಶ್ರೀರಂಗಪಟ್ಟಣ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ ಫೀಸ್ ಕಟ್ಟದ ಮಕ್ಕಳನ್ನ ತರಗತಿ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಶಾಲೆಯಲ್ಲಿ ಫೀಜ್ ಕಟ್ಟದ್ದಕ್ಕೆ ಮಕ್ಕಳನ್ನ ತರಗತಿ ಹೊರಗೆ ನಿಲ್ಲಿಸಿ ಅಮಾನವೀಯ ವರ್ತನೆ ಮಾಡಿದ್ದು, ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇನ್ನೂ ಈ ಖಾಸಗಿ ಶಾಲೆಯಲ್ಲಿ ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದೆ. ಫೀಸ್ ಕಟ್ಟದ ಮಕ್ಕಳಿಗೆ ಪರೀಕ್ಷೆ ಬರೆಯಲು ಕೊಡದೇ ತರಗತಿ ಹೊರಗೆ ನಿಲ್ಲಿಸಿ ಅಮಾನವೀಯ ವರ್ತನೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರೌಢಶಾಲಾ ಮತ್ತು ಪ್ರಾಥಮಿಕ ಹಂತದ ಮಕ್ಕಳಿಗೆ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಶಾಲಾ ಮಂಡಳಿ ಶುಲ್ಕ ಪಾವತಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದೆ. 1 ರಿಂದ 6ನೇ ತರಗತಿ ಮಕ್ಕಳಿಗೂ ಫೀಸ್ ಪಾವತಿಸುವಂತೆ ಒತ್ತಾಯ ಮಾಡಿದ್ದು, ಆಡಳಿತ ಮಂಡಳಿ ಹಾಗೂ ಶಿಕ್ಷಣ ಸಚಿವರ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.