ಮಂಡ್ಯ:ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕ್ಯಾಂಟರ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕ್ಯಾಂಟರ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ - 30ಕ್ಕೂ ಹೆಚ್ಚು ಜನರಿಗೆ ಗಾಯ
ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು, ಮುತ್ತತ್ತಿಗೆ ದೇವರ ಉತ್ಸವಕ್ಕಾಗಿ ಕ್ಯಾಂಟರ್‌ನಲ್ಲಿ ತೆರಳಿದ್ದರು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಮುತ್ತತ್ತಿಗೆ ದೇವರ ಉತ್ಸವಕ್ಕಾಗಿ ಕ್ಯಾಂಟರ್‌ನಲ್ಲಿ ತೆರಳಿದ್ದರು. ಈ ವೇಳೆ ಮುತ್ತತ್ತಿ ಅರಣ್ಯ ಪ್ರದೇಶದ ತಿರುವಿನಲ್ಲಿ ಕ್ಯಾಂಟರ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಾರ್ವಜನಿಕರೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳ ಸಹಾಯ ಪಡೆದು ಹಲಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ತೊಂದರೆ ಅನುಭವಿಸಿದ ಪ್ರಸಂಗವೂ ಜರುಗಿತು. ಘಟನೆ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.