ಮಂಡ್ಯ:ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಅನಗತ್ಯವಾಗಿ ರಸ್ತೆಗೆ ಇಳಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ವೀಕೆಂಡ್ ಕರ್ಫ್ಯೂ ವೇಳೆ ಅನಗತ್ಯವಾಗಿ ಅಡ್ಡಾಡಿದ್ರೆ ಕೇಸ್: ಮಂಡ್ಯ ಎಸ್ಪಿ ವಾರ್ನಿಂಗ್
ವೀಕೆಂಡ್ ಕರ್ಫ್ಯೂ ಇದ್ದರೂ ಯಾರಾದರೂ ಸುಖಾಸುಮ್ಮನೆ ರಸ್ತೆಯಲ್ಲಿ ಅಡ್ಡಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಮಂಡ್ಯ ಎಸ್ಪಿ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನಸಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು. ಪೂರ್ವ ನಿಗದಿ ಮದುವೆಗಳಿಗೆ ಒಪ್ಪಿಗೆ ಪಡೆದಿರಬೇಕು ಹಾಗೂ ಗೂಡ್ಸ್ ವಾಹನಗಳ ಓಡಾಟಕ್ಕೆ ಅವಕಾಶವಿದೆ. ಬೇರೆ ಯಾರಾದರೂ ಅನಗತ್ಯವಾಗಿ ಓಡಾಡಿದ್ರೆ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎರಡು ದಿನಗಳಲ್ಲಿ ನೈಟ್ ಕರ್ಫ್ಯೂ ವೇಳೆ ಅನಗತ್ಯವಾಗಿ ಓಡಾಡಿದವರ ಮೇಲೆ 50 ಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಈಗಲಾದರೂ ರಸ್ತೆಯಲ್ಲಿ ಅನಗತ್ಯವಾಗಿ ಯಾರು ಓಡಾಡಬಾರದು. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ ಎಚ್ಚರಿಕೆ ನೀಡಿದರು.