ಮಂಡ್ಯ: ಜಿಲ್ಲೆಯ ಹಲವು ಗಣಿ ಪ್ರದೇಶ ಹಾಗೂ ಕ್ರಷರ್‌ಗಳಿಗೆ ಇಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದ್ರೆ, ಹಲವು ನಿರೀಕ್ಷೆಯನ್ನಿಟ್ಟುಕೊಂಡಿದ್ದ ಜನರಿಗೆ ಸಚಿವರ ಭೇಟಿ ನೆಪ ಮಾತ್ರಕ್ಕೆಂದು ಕಾಣುತ್ತಿದೆ ಎನ್ನುವ ಮಾತುಗಳು ಕೆಲವೆಡೆ ಕೇಳಿ ಬರುತ್ತಿವೆ.
ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟೆಗೂ ಕಂಟಕ ಎದುರಾಗಿದೆ. ಕೆಆರ್‌ಎಸ್ ಅಣೆಕಟ್ಟು ಹಿತದೃಷ್ಟಿಯಿಂದ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಹಾಕುವಂತೆ ಸಾಕಷ್ಟು ಕೂಗು ಕೇಳಿ ಬರ್ತಿದೆ.
ಇಂದು ಮಂಡ್ಯ ಜಿಲ್ಲೆಯಲ್ಲಿ ಸಚಿವ ಸಿ ಸಿ ಪಾಟೀಲ್ ಪ್ರವಾಸ ಹಮ್ಮಿಕೊಂಡಿದ್ದರು. ಸಚಿವರ ಪ್ರವಾಸದ ಹಿನ್ನೆಲೆ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಹಾಕುತ್ತಾರೆ. ಕನ್ನಂಬಾಡಿ ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ದಿಟ್ಟ ನಿರ್ಧಾರ ಕೈಗೊಳ್ಳುತ್ತಾರೆಂದು ಜನ ವಿಶ್ವಾಸವಿರಿಸಿದ್ದರು. ಇನ್ನು, ಸಚಿವರನ್ನು ಭೇಟಿಯಾದ ಸ್ಥಳೀಯರು ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದ್ರು.