ಮಂಡ್ಯ:ಇಂದು ಜಿಲ್ಲೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದರು. ಈ ವೇಳೆ ರೈತ ಮಹಿಳೆಯರ ಜೊತೆ ನಾಟಿ ಮಾಡಿ ಗಮನ ಸೆಳೆದರು.
ಜಿಲ್ಲೆಗೆ ಆಗಮಿಸಿದ ಸಚಿವೆಗೆ ವಿವಿಧ ಕಲಾತಂಡಗಳು ಸೇರಿದಂತೆ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಬಳಿಕ ತಾಲೂಕಿನ ಹೊನಗನಹಳ್ಳಿ ಗ್ರಾಮದ ಭತ್ತದ ಗದ್ದೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ರೈತರೊಂದಿಗೆ ಸಚಿವೆ ಭತ್ತದ ಗದ್ದೆಗೆ ವಿಶೇಷ ಪೂಜೆ ಸಲ್ಲಿಸಿ ಗದ್ದೆಗಿಳಿದು ಭತ್ತ ನಾಟಿ ಮಾಡಿದರು.