ಕರ್ನಾಟಕ

karnataka

ETV Bharat / state

ಮಂಡ್ಯ ಜಿಲ್ಲೆಯ ಚೆಕ್ ಪೋಸ್ಟ್ ಸಿಬ್ಬಂದಿ ಫುಲ್​ ಅಲರ್ಟ್.. ನಗದು ಮತ್ತು ವಶಕ್ಕೆ ಪಡೆದ ವಸ್ತುಗಳ ಮಾಹಿತಿ - ETV Bharat kannada News

ಮಂಡ್ಯ ಜಿಲ್ಲೆಯಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಡಾ. ಹೆಚ್ ಎನ್ ಗೋಪಾಲಕೃಷ್ಣ ಹೇಳಿದರು.

Returning Officer Dr HN Gopalakrishna
ಚುನಾವಣಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ

By

Published : Apr 4, 2023, 7:53 PM IST

ಮಂಡ್ಯ :ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದ್ದು, ಚುನಾವಣೆ ಘೊಷಣೆಯಾದ ನಂತರ ಜಿಲ್ಲೆಯಾದ್ಯಂತ 56,61,970 ರೂ. ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಘೋಷಣೆಯ ಪೂರ್ವದಲ್ಲಿ ರೂ. 45,03,240 ನಗದು, 1009.933 ಲೀಟರ್ ಮದ್ಯ, 3.525 ಕೆ.ಜಿ ಡ್ರಗ್ಸ್, ಹಾಗು 4988 ಇತರೆ ಪದಾರ್ಥಗಳು ಸೇರಿದಂತೆ ಒಟ್ಟು 1,54,99,082 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೀಗ ಚುನಾವಣೆ ಘೋಷಣೆಯಾದ ನಂತರ ರೂ. 4,99,000 ನಗದು, 9562.240 ಲೀಟರ್ ಮದ್ಯ, 0.555 ಡ್ರಗ್ಸ್, 852 ಪದಾರ್ಥಗಳು ಸೇರಿದಂತೆ ಒಟ್ಟಾರೆ 56,61,970 ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮಾರ್ಚ್ 30 ರಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ 80 ವರ್ಷ ಮೇಲ್ಪಟ್ಟ ಮತ್ತು ವಿಕಲಚೇತನ ಮತದಾರರಿಗೆ ವಿಶೇಷವಾದ ಸೌಲಭ್ಯ ಕಲ್ಪಿಸಲಾಗಿದ್ದು, ಇವರಿಗೆ ಅಂಚೆ ಮೂಲಕ ಮತ ಚಲಾಯಿಸಲು ನಮೂನೆ-12ಡಿ ಅನ್ನು ವಿತರಣೆ ಮಾಡುವ ಬಗ್ಗೆ ತರಬೇತಿ ನೀಡಲಾಗಿದೆ ಎಂದರು.

ವಿಧಾನಸಭಾ ಕ್ಷೇತ್ರವಾರು ಮತದಾನ ಪೂರ್ವ ವಿದ್ಯುನ್ಮಾನ ಮತಯಂತ್ರಗಳ ಭದ್ರತಾ ಕೊಠಡಿ, ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳು: 186- ಮಳವಳ್ಳಿ-ಶಾಂತಿ ಪಿ.ಯು ಕಾಲೇಜು, 187-ಮದ್ದೂರು-ಹೆಚ್.ಕೆ ವೀರಣ್ಣಗೌಡ ಪಿ.ಯು ಕಾಲೇಜು, 188- ಮೇಲುಕೋಟೆ- ಪಿ.ಎಸ್.ಎಸ್.ಕೆ ಪ್ರೌಢಶಾಲೆ ಪಾಂಡವಪುರ, 189- ಮಂಡ್ಯ ವಿಶ್ವವಿದ್ಯಾಲಯ ಮಂಡ್ಯ, 190-ಶ್ರೀರಂಗಪಟ್ಟಣ-ಸರ್ಕಾರಿ ಪದವಿ ಪೂರ್ವ ಕಾಲೇಜು, 191-ನಾಗಮಂಗಲ-ಸರ್ಕಾರಿ ಜೂನಿಯರ್ ಕಾಲೇಜು, 192-ಕೆ.ಆರ್ ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕೇಂದ್ರಗಳಾಗಿ ಗುರುತಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ಮಾರ್ಚ್ 30 ರಂದು ಪ್ರಥಮ ಹಂತದ ರ್‍ಯಾಂಡಮೈಸೇಷನ್‌ ಕಾರ್ಯದ ನಂತರ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಗೆ ವಿದ್ಯುನ್ಮಾನ ಮತಯಂತ್ರಗಳನ್ನು ಹಂಚಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 34 ಚೆಕ್ ಪೋಸ್ಟ್ ತೆರೆಯಲಾಗಿದ್ದು, ಅನಧಿಕೃತ ಹಣ ಮತ್ತು ಇನ್ನಿತರೆ ಆಮಿಷ ಒಡ್ಡುವಂತಹ ವಸ್ತುಗಳ ಸಾಗಾಣಿಕೆ ಬಗ್ಗೆ ನಿಗಾ ವಹಿಸಲಾಗಿದೆ‌. ಹಗಲು ರಾತ್ರಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ನೀತಿಸಂಹಿತೆ ಉಲ್ಲಂಘನೆ ಆಗದ ರೀತಿ ಕ್ರಮವಹಿಸಲಾಗಿದೆ ಎಂದು ಚುನವಣಾಧಿಕಾರಿಗಳು ವಿವರಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌. ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್. ಹೆಚ್ ನಿರ್ಮಲ ಹಾಜರಿದ್ದರು.

ಇದನ್ನೂ ಓದಿ :ಸಂಸದೆ ಸುಮಲತಾ ಅನಿರೀಕ್ಷಿತವಾಗಿ ಬಂದಂತಹ ಕೂಸು: ಶಾಸಕ ರವೀಂದ್ರ ಶ್ರೀಕಂಠಯ್ಯ ಟೀಕೆ

ABOUT THE AUTHOR

...view details