ಮಂಡ್ಯ:ನೇಣು ಬಿಗಿದುಕೊಂಡು ಪೌರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಮಂಡ್ಯದಲ್ಲಿ ನೇಣು ಬಿಗಿದುಕೊಂಡು ಪೌರ ಕಾರ್ಮಿಕ ಆತ್ಮಹತ್ಯೆ - ಮಂಡ್ಯದಲ್ಲಿ ನೇಣು ಬಿಗಿದುಕೊಂಡು ಪೌರ ಕಾರ್ಮಿಕ ಆತ್ಮಹತ್ಯೆ
ಕಳೆದ 12 ವರ್ಷದಿಂದ ಮದ್ದೂರು ನಗರದಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯದಲ್ಲಿ ನೇಣು ಬಿಗಿದುಕೊಂಡು ಪೌರ ಕಾರ್ಮಿಕ ಆತ್ಮಹತ್ಯೆ
ಪಟ್ಟಣ ಪುರಸಭೆಯ ನೌಕರ ನಾರಾಯಣ್ (40) ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ಕಳೆದ 12 ವರ್ಷದಿಂದ ಮದ್ದೂರು ನಗರದಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೀವನದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತ ದೇಹವನ್ನು ಮಂಡ್ಯ ಮಿಮ್ಸ್ ಗೆ ರವಾನಿಸಿದ್ದಾರೆ.