ಕರ್ನಾಟಕ

karnataka

ETV Bharat / state

ಸಾಂಪ್ರದಾಯಿಕ ಉಡುಗೆಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಸಿಎಂ - ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಸಿಎಂ

ರೈತರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟು ಬೇಗ ತುಂಬುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಇಂದು ಮುಂಜಾನೆ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

CM basavaraj bommai
CM basavaraj bommai

By

Published : Oct 7, 2021, 9:09 AM IST

ಮಂಡ್ಯ: ಇಂದು ಮುಂಜಾನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರೈತರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟು ಬೇಗ ತುಂಬುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಇಂದು ಬೆಳಗ್ಗೆ ಹೋಮ-ಹವನಗಳ ಮೂಲಕ ಡ್ಯಾಂ ಬಳಿ ಪೂಜೆ ನೆರವೇರಿಸಲಾಯಿತು. ಪತ್ನಿ ಚನ್ನಮ್ಮ ಜತೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು.

ಕೃಷ್ಣರಾಜ ಸಾಗರ ಅಣೆಕಟ್ಟು ಬೇಗ ತುಂಬುವಂತೆ ಬಸವರಾಜ ಬೊಮ್ಮಾಯಿ ದಂಪತಿಯಿಂದ ಪೂಜೆ

ಧಾರ್ಮಿಕ ಸಂಪ್ರದಾಯದಂತೆ ಪೂಜೆ ಸಲ್ಲಿಸಿದ ಸಿಎಂ ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ್, ಬೈರತಿ ಬಸವರಾಜ್, ಸುನಿಲ್ ಕುಮಾರ್​, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.

ABOUT THE AUTHOR

...view details