ಮಂಡ್ಯ:ಇತ್ತ ಜನರ ಸಂಕಷ್ಟ ಕೇಳಲು ಸಿಎಂ ಕುಮಾರಸ್ವಾಮಿ ಯಾದಗಿರಿ ಜಿಲ್ಲೆಯ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರೆ, ಅತ್ತ ಸಕ್ಕರೆ ನಾಡಿನಲ್ಲಿ ರೈತರು ಬೆಳೆ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸುವಂತೆ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಚಂಡರಕಿಯಲ್ಲಿ ಸಿಎಂ ಗ್ರಾಮ ವಾಸ್ತವ್ಯ: ಮಂಡ್ಯದಲ್ಲಿ ನೀರಿಗಾಗಿ ರೈತರ ಅಹೋರಾತ್ರಿ ಧರಣಿ - undefined
ಒಂದೆಡೆ ಸಿಎಂ ಕುಮಾರಸ್ವಾಮಿ ಅವರು ಯಾದಗಿರಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರೆ ಇತ್ತು ಮಂಡ್ಯ ಜಿಲ್ಲೆಯಲ್ಲಿ ರೈತರು ನೀರಿಗಾಗಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಮಂಡ್ಯದಲ್ಲಿ ರೈತ ಸಂಘದ ಕಾರ್ಯಕರ್ತರು, ನಾಲೆಗಳಿಗೆ ನೀರು ಬಿಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಮಂಡ್ಯದಲ್ಲಿ ನೀರಿಗಾಗಿ ಅಹೋ ರಾತ್ರಿ ಧರಣಿ
ಹೌದು.., ಮಂಡ್ಯದ ರೈತ ಸಂಘದ ಕಾರ್ಯಕರ್ತರು ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಪೆಂಡಾಲ್ ಹಾಕಿಕೊಂಡು ಧರಣಿ ಮಾಡುತ್ತಿದ್ದು, ನೀರು ಬಿಡುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಜಿಲ್ಲೆಯ ಬೆಳೆಗಳ ರಕ್ಷಣೆಗೆ ಶೀಘ್ರವೇ ನೀರು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಇಟ್ಟುಕೊಂಡು ಅಹೋರಾತ್ರಿ ಹೋರಾಟ ಶುರು ಮಾಡಲಾಗಿದೆ. ಸ್ಥಳದಲ್ಲೇ ಅಡುಗೆ ಮಾಡಿ, ಊಟ ಮಾಡಿ ಧರಣಿ ಮಾಡುತ್ತಿದ್ದಾರೆ. ರೈತ ಮುಖಂಡರಾದ ಚಾಮರಸ ಪಾಟೀಲ್, ಬಡಗಲಪುರ ನಾಗೇಂದ್ರ, ದರ್ಶನ್ ಪುಟ್ಟಣ್ಣಯ್ಯ, ನಂದಿನಿ ಜಯರಾಮ್ ಕೂಡ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.