ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ... ಜೆಡಿಎಸ್ ವಿರುದ್ಧ 3 ಪ್ರತ್ಯೇಕ ಎಫ್​ಐಆರ್

ನೀತಿ ಸಂಹಿತೆ ಉಲ್ಲಂಘನೆ ಆರೋಪ- ಜೆಡಿಎಸ್​ ವಿರುದ್ಧ ಮೂರು ಎಫ್​ಐಆರ್​- ಐಪಿಸಿ 143, 342, ಆರ್.ಡಬ್ಲ್ಯೂ 149 ಐಪಿಸಿ ಅಡಿ ಮಂಡ್ಯ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು

ನೀತಿ ಸಂಹಿತೆ ಉಲ್ಲಂಘನೆ

By

Published : Mar 27, 2019, 8:01 AM IST

ಮಂಡ್ಯ:ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಜೆಡಿಎಸ್ ವಿರುದ್ಧ 3 ಪ್ರತ್ಯೇಕ ಎಫ್​ಐಆರ್ ದಾಖಲಾಗಿವೆ. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತ ಚುನಾವಣಾಧಿಕಾರಿಗಳು ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಫ್ಲೈಯಿಂಗ್​ ಸ್ಕ್ವಾಡ್ ರವಿ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್​ಐಆರ್ ದಾಖಲಾಗಿವೆ.

ಕಾವೇರಿ ಉದ್ಯಾನವನದಲ್ಲಿ ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರು ಹೂ ಕುಂಡಗಳು, ಹೂವಿನ ಗಿಡಗಳು, ಪೌಂಟೇನ್, ವಿದ್ಯುತ್ ಸಂಪರ್ಕಗಳು, ಲಾನ್ ತುಳಿದು ಹಾಳು ಮಾಡಿದ್ದರು. ಜೊತೆಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆಯ ಪೋಲ್ಸ್ ಕೆಡವಿದ್ದರಿಂದ ಸುಮಾರು 8 ಲಕ್ಷ ರೂ. ಹಾನಿಯಾಗಿದೆ ಎಂದು ದೂರು ನೀಡಲಾಗಿದೆ. ದೂರಿನ ಹಿನ್ನಲೆಯಲ್ಲಿ ಕಲಂ 427 ಐಪಿಸಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ನಿಯಂತ್ರಣ ಕಾಯ್ದೆ 1984ರ ಕಲಂ 3ರ ಅಡಿ ಪ್ರಕರಣ ದಾಖಲಾಗಿದೆ.

ಜಯಚಾಮರಾಜೇಂದ್ರ ವೃತ್ತದಲ್ಲಿ ಅನುಮತಿ ಪಡೆಯದೆ ಹಸಿರು, ಬಿಳಿ ಬಣ್ಣದ ಪೇಪರ್ ಚೂರುಗಳನ್ನ ಸಿಡಿಸಿ ಮನರಂಜನೆ ಹೆಸರಲ್ಲಿ ಮತದಾರರನ್ನು ಸೆಳೆಯಲು ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಸಬಾ 1ರ ಫ್ಲೈಯಿಂಗ್ ಸ್ಕ್ವಾಡ್ ಸುಧಾಮ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಐಪಿಸಿ 143, 342, ಆರ್.ಡಬ್ಲ್ಯೂ 149 ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ.

ಮಾ. 25 ರಂದು ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆ ತನಕ ನಿಂತು ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸ್ಕ್ವಾಡ್ ಸುಧಾಮ ದೂರು ನೀಡಿದ್ದರು. ಈ ದೂರು ಆಧರಿಸಿ ಕಲಂ 171 (ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details