ಮಂಡ್ಯ: ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಮುಂದುವರೆದಿದ್ದು, ಸತತ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇದರಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಇತ್ತೀಚೆಗಷ್ಟೇ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ ಹಾಗೂ ಶಿಂಷಾ ನದಿಯ ತಡೆಗೋಡೆ ಸೋಮವಾರ ಸುರಿದ ಭಾರೀ ಮಳೆಗೆ ಕೊಚ್ಚಿಹೋಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಇದನ್ನು ಇತ್ತೀಚೆಗಷ್ಟೇ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಆದರೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿಂಷಾ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆ.