ಮಂಡ್ಯ:ಪತ್ರಕರ್ತರ ಮೇಲೆ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಪುತ್ರನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ವಿರುದ್ಧ ದೂರು ದಾಖಲಾಗಿದ್ದು,ನಾಲ್ವರು ಪತ್ರಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ ಹಲ್ಲೆ ಪ್ರಕರಣ: ಶ್ರೀಕಂಠೇಗೌಡ ಪುತ್ರನಿಂದ ಪತ್ರಕರ್ತರ ಮೇಲೆ ಪ್ರತಿ ದೂರು - ಮಂಡ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ
ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಪುತ್ರನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,ನಾಲ್ವರು ಪತ್ರಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಂಎಲ್‌ಸಿ ಕೆ.ಟಿ. ಶ್ರೀಕಂಠೇಗೌಡ ಪುತ್ರ ಕೃಷಿಕ್ ಗೌಡ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಖಾಸಗಿ ವಾಹಿನಿ ವರದಿಗಾರರಾದ ಕೆ.ಎನ್. ನಾಗೇಗೌಡ, ಸುನಿಲ್ ಕುಮಾರ್, ಕ್ಯಾಮರಾಮನ್‌ಗಳಾದ ಮದನ್ ಹಾಗೂ ಮಹೇಶ್ ಮೇಲೆ ಪ್ರಕರಣ ದಾಖಲಾಗಿದೆ. ಏಪ್ರಿಲ್ 25ರಂದು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಪತ್ರಕರ್ತರಿಗೆ ಕೊರೊನಾ ಪರೀಕ್ಷೆ ಆಯೋಜನೆ ಮಾಡಿತ್ತು.
ಪರೀಕ್ಷೆ ನಡೆಸುವ ಸಂದರ್ಭ ಸ್ಥಳಕ್ಕೆ ಆಗಮಿಸಿದ್ದ ಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಕೃಷಿಕ್ ಗೌಡ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಕ್ಕೆ ಕೆ.ಟಿ. ಶ್ರೀಕಂಠೇಗೌಡ ಸೇರಿ ಅವರ ಪುತ್ರ ಹಾಗೂ ಐವರ ಮೇಲೆ ಪ್ರಕರಣ ದಾಖಲಾಗಿತ್ತು. ನಂತರ ಷರತ್ತು ಬದ್ಧ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಪ್ರಕರಣ ಸಂಬಂಧ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಪುತ್ರ ಕೃಷಿಕ್ ಗೌಡ ಪ್ರತಿ ದೂರು ನೀಡಿದ್ದು, ನಾಲ್ವರ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.