ಮಂಡ್ಯ:ಸಚಿವ ಹೆಚ್.ಡಿ. ರೇವಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಏಕಾಏಕಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವರ್ಗಾವಣೆ: ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು - undefined
ಸಚಿವ ಹೆಚ್.ಡಿ. ರೇವಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಏಕಾಏಕಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಶಿವಕುಮಾರ್ ಆರಾಧ್ಯ
ಶಿವಕುಮಾರ್ ಆರಾಧ್ಯ, ಬಿಜೆಪಿ ಕಾರ್ಯಕರ್ತ
ಬಿಜೆಪಿ ಮುಖಂಡ ಶಿವಕುಮಾರ್ ಆರಾಧ್ಯ ಎಂಬವರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದು, ವರ್ಗಾವಣೆಯನ್ನು ತಡೆಹಿಡಿಯುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಜನತೆ ಸಂಕಷ್ಟದಲ್ಲಿ ಇದ್ದಾರೆ, ಮೇವಿನ ಕೊರತೆ ಇದೆ. ನೀರಿಲ್ಲದೆ ಬೆಳೆಗಳು ಒಣಗುತ್ತಿವೆ.ಆದರೂ ರೇವಣ್ಣ ವರ್ಗಾವಣೆ ಮಾಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದು, ಜೊತೆಗೆ ಅಧಿಕಾರಿಗಳಿಗೆ ನಿಂಬೆಹಣ್ಣು ನೀಡಿ ದೂರು ನೀಡಿದ್ದಾರೆ.