ಮಂಡ್ಯ:ಮೈತ್ರಿ ಧರ್ಮ ಪಾಲಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ನರೇಂದ್ರ ಸ್ವಾಮಿ ಹಾಗು ಚೆಲುವರಾಯಸ್ವಾಮಿ ವಿರುದ್ಧ ಉಚ್ಛಾಟನೆಗೆ ಕಾರ್ಯಕರ್ತರ ಒತ್ತಡ ಹೆಚ್ಚುತ್ತಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಇಂದು ಎಸ್‌ಸಿ/ಎಸ್‌ಟಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ.ಪರಮೇಶ್ವರ್,ಹೈಕಮಾಂಡ್ ಆದೇಶದಂತೆ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನ ಬೆಂಬಲಿಸಬೇಕು. ಇಲ್ಲವಾದಲ್ಲಿ ಪಕ್ಷ ಕಠಿಣ ಕ್ರಮ ಕೈಗೊಳ್ಳಲಿದೆ ಎಂದುಬಂಡಾಯ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.