ಮಂಡ್ಯ:ನಿಯೋಜಿತ ಸಂಸದೆ ಸುಮಲತಾ ಅಂಬರೀಶ್‌ರ ಸ್ವಾಭಿಮಾನಿಗಳ ಅಭಿನಂದನಾ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.
ಸುಮಲತಾ ಸ್ವಾಭಿಮಾನಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್! - undefined
ಮಂಡ್ಯದಲ್ಲಿ ಸುಮಲತಾ ಅವರ ಸ್ವಾಭಿಮಾನಿ ಸಮಾವೇಶ ನಡೆಯುತ್ತಿದೆ. ಆದ್ರೆ ಸಮಾವೇಶ ನಡೆಯಲಿರೋ ಸ್ಥಳದ ಸುತ್ತಮುತ್ತ ಹಲವು ನಾಯಕರ ಭಾವಚಿತ್ರವಿರುವ ಫ್ಲೆಕ್ಸ್ ಹಾಕಲಾಗಿದ್ದು, ಜನರು ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ.
ಸ್ವಾಭಿಮಾನಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಪ್ಲೆಕ್ಸ್!
ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಹಲವು ನಾಯಕರ ಭಾವಚಿತ್ರವಿರುವ ಫ್ಲೆಕ್ಸ್ ಹಾಕಲಾಗಿದೆ. ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ, ರೆಬೆಲ್ ನಾಯಕರಾದ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಸಚಿವ ಜಮೀರ್ ಆಹಮದ್, ಕೆ ಬಿ ಚಂದ್ರಶೇಖರ್, ಗಣಿಗ ರವಿಕುಮಾರ್, ನರೇಂದ್ರ ಸ್ವಾಮಿ ಸೇರಿದಂತೆ ಹಲವು ನಾಯಕರ ಬಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಲಾಗಿದೆ.
ಸಮಾವೇಶ ನಡೆಯುವ ಸ್ಥಳದಲ್ಲಿ ಈ ಫ್ಲೆಕ್ಸ್‌ಗಳನ್ನು ಅಳವಡಿಸಿದ್ದು, ನಾಗರಿಕರು ಫ್ಲೆಕ್ಸ್ ನೋಡಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ.