ಮಂಡ್ಯ: ಶ್ರೀರಂಗಪಟ್ಟಣ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಮೂಲ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ.
ನಿನ್ನೆ ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಸಮುದಾಯ ಭವನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಪಾಲಹಳ್ಳಿ ಚಂದ್ರಶೇಖರ್ ಹಾಗೂ ಮರಳಾಗಾಲ ಧನಂಜಯ್ ನೇತೃತ್ವದಲ್ಲಿ ಸಭೆ ನಡೆಲಾಗಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾರ್ಯಕರ್ತರು ಹಾಗೂ ಮುಖಂಡರುಗಳ ಸಭೆಯಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಹಿನ್ನೆಲೆ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಶಕ್ತಿ ಪ್ರದರ್ಶನಕ್ಕಾಗಿ ಸಭೆ ಆಯೋಜಿಸಲಾಗಿತ್ತು.