ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ 1,959 ಜನರಿಗೆ ಕೊರೊನಾ ವಕ್ಕರಿಸಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42,439ಕ್ಕೆ ಏರಿಕೆಯಾಗಿದೆ. ನಿನ್ನೆ 1,627 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 33,817 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ನಿನ್ನೆ 9 ಮಂದಿ ಕೊರೊನಾಗೆ ಬಲಿಯಾಗಿದ್ದು, ಈವರೆಗೆ ಒಟ್ಟು 274 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 8,346ಕ್ಕೆ ಏರಿಕೆಯಾಗಿದೆ.