ಕರ್ನಾಟಕ

karnataka

ETV Bharat / state

ಸಂಸದೆ ಸುಮಲತಾ ಅಂಬರೀಶ್​ ಜೊತೆ ಸಂಪರ್ಕ: ಕ್ವಾರಂಟೈನ್​ ಆಗ್ತಾರಾ ಇಬ್ಬರು ಸಚಿವರು..?

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಚಿವ ಎಸ್ ‌ಟಿ ಸೋಮಶೇಖರ್ ಹಾಗೂ ನಾರಾಯಣ ಗೌಡ ಕ್ವಾರಂಟೈನ್‌ಗೆ ಒಳಗಾಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

sumalatha-ambarish
ಸುಮಲತಾ ಅಂಬರೀಶ್‌

By

Published : Jul 7, 2020, 5:48 PM IST

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಇಬ್ಬರು ಸಚಿವರು ಕ್ವಾರಂಟೈನ್‌ಗೆ ಒಳಗಾಗುತ್ತಾರಾ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ಜೂನ್ 30ರಂದು ನಗರದ ರೈತ ಸಭಾಂಗಣದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಎಸ್ ‌ಟಿ ಸೋಮಶೇಖರ್ ಹಾಗೂ ನಾರಾಯಣ ಗೌಡ ಪಾಲ್ಗೊಂಡಿದ್ದರು. ನಂತರ ಜುಲೈ 4 ರಂದು ಅನಾರೋಗ್ಯ ನಿಮಿತ್ತ ಸಂಸದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗಂಟಲು ದ್ರವ ನೀಡಿದ್ದರು.

ಈಗ ಸಂಸದೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಇಬ್ಬರು ಸಚಿವರು ಸೇರಿದಂತೆ ಜಿಲ್ಲಾಧಿಕಾರಿ ವೆಂಕಟೇಶ್ ಕ್ವಾರಂಟೈನ್‌ಗೆ ಒಳಗಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಸಂಸದೆ ತಮ್ಮ ಜೊತೆ ಸಂಪರ್ಕದಲ್ಲಿದ್ದವರ ಪಟ್ಟಿಯನ್ನು ಈಗಾಗಲೇ ಅಧಿಕಾರಿಗಳಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details