ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಸಿಬ್ಬಂದಿಗೆ ಕೊರೊನಾ: ಮಂಡ್ಯ ಎಸ್‌ಪಿ ಕಚೇರಿ ಸ್ಯಾನಿಟೈಸ್ - mandya corona news
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಓರ್ವ ಸಿಬ್ಬಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಎಸ್‌ಪಿ ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು
ಕಚೇರಿಯ ಸಿಬ್ಬಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಓರ್ವ ಸಿಬ್ಬಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ಪುರಸಭೆ ಸಿಬ್ಬಂದಿ ಕಚೇರಿಯ ಮೊದಲ ಮಹಡಿ ಹಾಗೂ ನೆಲ ಮಹಡಿ ಸ್ಯಾನಿಟೈಸ್ ಮಾಡಿದ್ದಾರೆ.