ಮಂಡ್ಯ: ಕೊರೊನಾ ನಿಯಂತ್ರಣ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗರ್ಭಿಣಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯದಲ್ಲಿ ಕೊರೊನಾ ಸೋಂಕಿತ ಗರ್ಭಿಣಿ ಸಾವು: ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ಆಸ್ಪತ್ರೆಗೆ ಸೇರಿಸಿಕೊಳ್ಳಲು ವೈದ್ಯರು, ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರಿಂದ ಕೊರೊನಾ ಸೋಂಕಿತ ಗರ್ಭಿಣಿ ಮೃತಪಟ್ಟಿದ್ದಾಳೆ ಎಂಬ ಆರೋಪ ಮಂಡ್ಯ ನಗರದಲ್ಲಿ ಕೇಳಿ ಬಂದಿದೆ.
ಚಿನ್ನೇನಹಳ್ಳಿ ಗ್ರಾಮದ ವೀಣಾ(27) ಮೃತ ದುರ್ದೈವಿ. ಹೊಟ್ಟೆನೋವು ಕಾಣಿಸಿಕೊಂಡಿದ್ದ ವೀಣಾ ಆಗಸ್ಟ್ 18ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆಯಂತೆ ಆಗಸ್ಟ್ 20ರಂದು ಕ್ಯಾತುಂಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ತಪಾಸಣೆ ಮಾಡಿಸಲಾಗಿತ್ತು.
ಆಗಸ್ಟ್ 21ರಂದು ವರದಿಯಲ್ಲಿ ಪಾಸಿಟಿವ್ ಬಂದರೂ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ರಾತ್ರಿ ಉಸಿರಾಟದ ಸಮಸ್ಯೆಯಿಂದ ಗರ್ಭಿಣಿ ಮೃತಟ್ಟಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಸಾವಿಗೆ ಕಾರಣ ಎಂದು ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.