ಮಂಡ್ಯ:ಸುಟ್ಟ ಪರಿಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಳವಳ್ಳಿ ಪಟ್ಟಣದ ಕ್ರೀಡಾಂಗಣದ ಬಳಿ ನಡೆದಿದೆ.
ಮಳವಳ್ಳಿ ಬಳಿ ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ! - Malavalli crime news
ಮಳವಳ್ಳಿ ಬಳಿ ಸುಟ್ಟ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಠಾಣೆ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಸುಮಾರು 35 ರಿಂದ 40 ವರ್ಷದ ವ್ಯಕ್ತಿಯ ಶವ ಇದಾಗಿದ್ದು, ಬೆಂಕಿ ಉರಿಯುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ವಿಚಾರ ತಿಳಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಹೊರ ಭಾಗದಲ್ಲಿ ಕೊಲೆ ಮಾಡಿ, ನಂತರ ಕ್ರೀಡಾಂಗಣದ ಬಳಿ ಸುಟ್ಟು ಹಾಕಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಠಾಣೆ ಪೊಲೀಸರು, ಅಪರಿಚಿತ ವ್ಯಕ್ತಿಯ ಗುರುತು ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.