ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಬಳಿಯ ರಸ್ತೆಯಲ್ಲಿ ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷವಾಗಿದ್ದು, ಇದರಿಂದ ಭಯಭೀತರಾದ ಇಲ್ಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ರಸ್ತೆಯಲ್ಲಿ ಸಂಚರಿಸುತ್ತಿದ್ದ ಮೊಸಳೆಯ ವಿಡಿಯೋವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ.
ರಾತ್ರಿ ವೇಳೆ ರಸ್ತೆಯಲ್ಲಿ ಪ್ರತ್ಯಕ್ಷವಾದ ಮೊಸಳೆ: ಮೊಬೈಲ್ನಲ್ಲಿ ವಿಡಿಯೋ ಸೆರೆ - ಮಂಡ್ಯ ಇತ್ತೀಚಿನ ಸುದ್ದಿ
ರಂಗನತಿಟ್ಟು ಪಕ್ಷಿಧಾಮದ ವಿರಿಜಾ ನಾಲೆಯಿಂದ ಮೊಸಳೆಗಳು ಹೊರ ಬಂದಿದೆ ಎನ್ನಲಾಗಿದೆ. ರಾತ್ರಿ ವೇಳೆ ರೋಡಿನಲ್ಲಿ ಭಾರಿ ಗಾತ್ರದ ಮೊಸಳೆ ಕಾಣಿಸಿಕೊಂಡು ಅತ್ತಿಂದ್ದಿತ್ತ ಸಂಚರಿಸುವ ಮೂಲಕ ಜನರಲ್ಲಿ ಆತಂಕ ಮೂಡಿಸಿದೆ.

ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮದ ವಿರಿಜಾ ನಾಲೆಯಿಂದ ಮೊಸಳೆಗಳು ಹೊರ ಬಂದಿದೆ ಎನ್ನಲಾಗಿದೆ. ರಾತ್ರಿ ವೇಳೆ, ರೋಡಿನಲ್ಲಿ ಭಾರೀ ಗಾತ್ರದ ಮೊಸಳೆ ಕಾಣಿಸಿಕೊಂಡು ಅತ್ತಿಂದ್ದಿತ್ತ ಸಂಚರಿಸುವ ಮೂಲಕ ಜನರಲ್ಲಿ ಆತಂಕ ಮೂಡಿಸಿದೆ.
ಕಳೆದ 15 ದಿನಗಳ ಹಿಂದೆ ವಿರಿಜಾ ನಾಲೆಯಲ್ಲಿ ಕಾಣಿಸಿಕೊಂಡಿದ್ದ ಮೊಸಳೆ ನಾಲೆಯಿಂದ ಮೇಲೆ ಬಂದು ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿತ್ತು. ಇದೀಗ ಮತ್ತೆ ಆಹಾರಕ್ಕಾಗಿ ರಾತ್ರಿ ವೇಳೆ ಸಂಚರಿಸುತ್ತಿದೆ ಎಂದು ಜನರು ಹೇಳುತ್ತಾರೆ. ಅಷ್ಟೇ ಅಲ್ಲದೆ, ಈವರೆಗೆ ಕುರಿ ಮೇಕೆಗಳ ಮೇಲೆ ದಾಳಿ ನಡೆಸಿರುವ ಮೊಸಳೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.