ಮಂಡ್ಯ :ಬೆಳೆದ ಬೆಳೆಗಳು ನಾಶವಾಗುತ್ತಿರುವಾಗ ಜಿಲ್ಲೆಯ ರೈತರ ಸಂಕಷ್ಟ ಅರಿತ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ. ಕೆ ಸುರೇಶ್ ರೈತರಿಗೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲು ಜಿಲ್ಲೆಯಲ್ಲಿ 240 ಟನ್ನಷ್ಟು ತರಕಾರಿ, ಹಣ್ಣುಗಳನ್ನು ಖರೀದಿ ಮಾಡಿದ್ದಾರೆ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಯಾರಿಗೂ ತಿಳಿಯದಂತೆ ರೈತರ ತೋಟಗಳಿಗೆ ಭೇಟಿ ನೀಡುತ್ತಿರುವ ಸಂಸದ ಡಿ.ಕೆ ಸುರೇಶ್ ರೈತರಿಗೆ ಆಗುತ್ತಿದ್ದ ನಷ್ಟವನ್ನು ತಪ್ಪಿಸುತ್ತಿದ್ದಾರೆ. ತಮ್ಮ ಕ್ಷೇತ್ರದ ಜನರಿಗಾಗಿ ಸುಮಾರು 240 ಟನ್ನಷ್ಟು ತರಕಾರಿ ಹಾಗೂ ಹಣ್ಣುಗಳನ್ನು ಜಿಲ್ಲೆಯ ರೈತರಿಂದ ಖರೀದಿ ಮಾಡಿ ತೆಗೆದುಕೊಂಡು ಹೋಗಿದ್ದಾರೆ.