ಮಂಡ್ಯ:ಸೊಸೆಯನ್ನು ಮಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ.
ಮಂಡ್ಯದಲ್ಲಿ ಸೊಸೆಯನ್ನೇ ಚಾಕುವಿನಿಂದ ಇರಿದು ಕೊಂದ ಮಾವ! - daughter in law killed by her father in law
ಸೊಸೆಯನ್ನು ಮಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ.
ಸೊಸೆಯನ್ನ ಕೊಲೆ ಮಾಡಿದ ಮಾವ
ಗ್ರಾಮದ ನಾಗರಾಜು(47) ಎಂಬಾತ ತನ್ನ ಸೊಸೆ ವೀಣಾ(26) ಎಂಬಾಕೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕಳೆದ ರಾತ್ರಿ ನಾಗರಾಜು ಪುತ್ರ ಅಂಗಡಿಯಲ್ಲಿ ಇದ್ದ ಸಂದರ್ಭದಲ್ಲಿ ಒಂಟಿಯಾಗಿದ್ದ ವೀಣಾ ಮೇಲೆ ದಾಳಿ ಮಾಡಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನೆ ನಂತರ ಆರೋಪಿ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.