ಮಂಡ್ಯ: ಮದ್ದೂರು ತಾಲೂಕಿನ ಸಹಕಾರ ಸಂಘದ ಷೇರುದಾರ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯ ಚೆಕ್ಗಳನ್ನು ಶಾಸಕ ಡಿ.ಸಿ. ತಮ್ಮಣ್ಣ ವಿತರಣೆ ಮಾಡಿದರು.
ಮದ್ದೂರು ಪಟ್ಟಣದ ಶಿಂಷಾ ಸಹಕಾರ ಬ್ಯಾಂಕ್ನಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಸಚಿವರು, ಷೇರುದಾರರು ನೀಡುವ ಷೇರಿನ ಹಣವನ್ನು ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಅಭಿವೃದ್ದಿಯತ್ತ ಸಾಗುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಪಾತ್ರ ಮಹತ್ವದಾಗಿರುತ್ತದೆ. ಇದನ್ನು ಅರಿತು ಕೆಲಸ ಮಾಡುವ ಮೂಲಕ ಸಹಕಾರ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.