ಕರ್ನಾಟಕ

karnataka

ETV Bharat / state

ಚಿತೆ ಮೇಲಿದ್ದ ಮೃತದೇಹ ಮರಣೋತ್ತರ ಪರೀಕ್ಷೆಗೆ! - Mandya Crime news

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಘಟನೆ ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

Dead body sent to Postmortem during cremation
ಚಿತೆಯೇರಿದ್ದ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ

By

Published : Feb 11, 2021, 8:01 PM IST

ಮಂಡ್ಯ:ಕುಟುಂಬಸ್ಥರು ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಚಿತೆಯ ಮೇಲಿಟ್ಟಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ನಿನ್ನೆ ಪತ್ತೆಯಾಗಿತ್ತು. ವಿಜಯಲಕ್ಷ್ಮಿ (38) ಮೃತರು. ಹೀಗಾಗಿ ಗ್ರಾಮಸ್ಥರು ಗ್ರಾಮದ ಹೊರವಲಯದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದರು.

ಇದನ್ನೂ ಓದಿ...ಬೆಟ್ಟಿಂಗ್​​ ಕಾಳಗ​: ಕೋಳಿಗಳ ಸಮೇತ 10ಕ್ಕೂ ಹೆಚ್ಚು ಜನರ ಬಂಧನ

ವಿಜಯಲಕ್ಷ್ಮಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕುಟುಂಬಸ್ಥರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಚಿತೆ ಮೇಲಿದ್ದ ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ABOUT THE AUTHOR

...view details