ಮಂಡ್ಯ :ಊಟದ ಬಿಲ್ ಕೇಳಿದ್ದಕ್ಕೆ ಡಾಬಾ ಮಾಲೀಕನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಬಳಿಯ ಬ್ಲೂವೇಲ್ ಡಾಬಾದಲ್ಲಿ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು ಡಾಬಾದಲ್ಲಿ ಕಂಠಪೂರ್ತಿ ಕುಡಿದಿದ್ದಾರೆ. ಡಾಬಾ ಮಾಲೀಕ ಬಿಲ್ ಕೇಳಿದಾಗ ಬಿಯರ್ ಬಾಟಲ್ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಡಾಬಾ ಮಾಲೀಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.