ಮಂಡ್ಯ:ಕ್ವಾರಂಟೈನ್‌ನಲ್ಲಿದ್ದ 66 ವರ್ಷದ ವೃದ್ದೆ ಎದೆ ನೋವಿನಿಂದ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ಸೋಮನಹಳ್ಳಿ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.
ಕ್ವಾರಂಟೈನ್‌ನಲ್ಲಿದ್ದ ವೃದ್ಧೆ ಸಾವು: ವರದಿಗಾಗಿ ಕಾಯುತ್ತಿರುವ ಅಧಿಕಾರಿಗಳು
ಮುಂಬೈನಿಂದ ಬಂದು ಕ್ವಾರಂಟೈನ್‌ಗೆ ಒಳಗಾಗಿದ್ದ 66 ವರ್ಷದ ವೃದ್ದೆ ಎದೆ ನೋವಿನಿಂದ ಸಾವನ್ನಪ್ಪಿದ್ದಾರೆ. ವೃದ್ದೆಯ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ವರದಿಯಲ್ಲಿ ಪಾಸಿಟಿವ್ ಎಂದು ಬಂದರೆ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ ಇದಾಗಲಿದೆ.
ಕೊರೊನಾ
ಮುಂಬೈನಿಂದ ಬಂದು ಕ್ವಾರಂಟೈನ್‌ಗೆ ಒಳಗಾಗಿದ್ದ ಇವರನ್ನು ಮಂಗಳವಾರ ಬೆಳಗ್ಗೆಯಷ್ಟೆ ಕೋವಿಡ್ ತಪಾಸಣೆಗೆ ಒಳಪಡಿಸಿ, ಪರೀಕ್ಷೆಗಾಗಿ ಗಂಟಲು ದ್ರವ ಸಂಗ್ರಹ ಮಾಡಲಾಗಿತ್ತು. ಇಂದು ಸಂಜೆ ಕ್ವಾರಂಟೈನ್ ಕೇಂದ್ರದಲ್ಲಿ ಮೃತಪಟ್ಟಿದ್ದು, ವೃದ್ದೆಯ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ವರದಿಯಲ್ಲಿ ಪಾಸಿಟಿವ್ ಎಂದು ಬಂದರೆ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ ಇದಾಗಲಿದೆ.
ವೃದ್ದೆಯ ವರದಿ ಬಂದ ನಂತರ ಶವ ಹಸ್ತಾಂತರಿಸಲು ಅಧಿಕಾರಿಗಳು ನಿರ್ಧಾರ ಮಾಡಿದ್ದು, ವರದಿ ಪಾಸಿಟಿವ್ ಬಂದರೆ ಕೋವಿಡ್ ನಿಯಮದಂತೆ ವೃದ್ದೆಯ ಅಂತ್ಯ ಸಂಸ್ಕಾರ ನಡೆಯಲಿದೆ.