ಕರ್ನಾಟಕ

karnataka

ETV Bharat / state

ಸಿಎಂ ತವರಿಗೆ ಡಿಸಿ ಭೇಟಿ: ಬೂಕನಕೆರೆ ಅಭಿವೃದ್ಧಿಗೆ ಗ್ರಾ.ಪಂ ಸದಸ್ಯರೊಂದಿಗೆ ಚರ್ಚೆ - ಮಂಡ್ಯ ಜಿಲ್ಲೆ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ, ಅಭಿವೃದ್ಧಿ ಯೋಜನೆಗಳ ಕುರಿತು ಗ್ರಾಮ ಪಂಚಾಯಿತಿ ಸದಸ್ಯರಿಂದ ಮಾಹಿತಿ ತೆಗೆದುಕೊಂಡರು.

ಬೂಕನಕೆರೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರ ಜತೆ ಜಿಲ್ಲಾಧಿಕಾರಿ ಚರ್ಚೆ

By

Published : Aug 16, 2019, 4:29 PM IST

ಮಂಡ್ಯ: ಸಿಎಂ ಬಿ.ಎಸ್.ವೈ ಅವರ ತವರು ಗ್ರಾಮವಾದ ಬೂಕನಕೆರೆಯ ಅಭಿವೃದ್ಧಿ ಕುರಿತಂತೆ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಶುಕ್ರವಾರ ಭೇಟಿ ನೀಡಿದ್ದಾರೆ.

ಬೂಕನಕೆರೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರ ಜತೆ ಜಿಲ್ಲಾಧಿಕಾರಿ ಚರ್ಚೆ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮಹತ್ವದ ವಿಷಯಗಳನ್ನು ಸದಸ್ಯರು ಹಾಗೂ ಮುಖಂಡರ ಜತೆ ಚರ್ಚಿಸಿದರು.

ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಸುಮಾರು 2 ಗಂಟೆಗಳ ಕಾಲ ಸಭೆ ನಡೆಸಲಾಯಿತು.

ಗ್ರಾಮದ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಸಮಸ್ಯೆ, ಸ್ಮಶಾನ ಜಾಗದ ಸಮಸ್ಯೆ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ತೆಗೆದುಕೊಂಡರು. ಗ್ರಾಮದ ಅಭಿವೃದ್ಧಿ ವಿಚಾರವಾಗಿ ತಹಸೀಲ್ದಾರ್, ತಾಲೂಕು ಪಂಚಾಯಿತಿ ಅಧಿಕಾರಿಗಳಿಂದಲೂ ಮಾಹಿತಿ ಪಡೆದರು.

ABOUT THE AUTHOR

...view details