ಮಂಡ್ಯ:ಹುಚ್ಚು ನಾಯಿಯೊಂದು ಒಂದೇ ದಿನ 40 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ.
ಮಂಡ್ಯ: ಒಂದೇ ದಿನ 40ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿ ದಾಳಿ - Dog attack on people in Mandya news
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ಹುಚ್ಚು ನಾಯಿಯೊಂದು ಒಂದೇ ದಿನ 40 ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ. ಕೆ.ಆರ್.ಪೇಟೆ ಪಟ್ಟಣ, ಮಾಕವಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡ ಹಳ್ಳಿ ಸೇರಿದಂತೆ ಹಲವೆಡೆ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ.

ಮಂಡ್ಯ: ಒಂದೇ ದಿನ 40 ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿ ದಾಳಿ
ಹುಚ್ಚು ನಾಯಿ ದಾಳಿ
ಕೆ.ಆರ್.ಪೇಟೆ ಪಟ್ಟಣ, ಮಾಕವಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡ ಹಳ್ಳಿ ಸೇರಿದಂತೆ ಹಲವೆಡೆ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಗಾಯಾಳುಗಳನ್ನು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರಿಗೂ ನಾಯಿ ಕಚ್ಚಿದೆ. ಇದರಿಂದಾಗಿ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೂಡಲೇ ಹುಚ್ಚು ನಾಯಿ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.