ಕರ್ನಾಟಕ

karnataka

ETV Bharat / state

ಮಂಡ್ಯದ ಜೋಡಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು - ಗುಂಡಣ್ಣ-ಲಲಿತಮ್ಮ ದಂಪತಿಯ ಹತ್ಯೆ

ಮಂಡ್ಯದ ರಾಯಸಮುದ್ರ ಗ್ರಾಮದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು 15 ದಿನದೊಳಗೆ ಕೆ.ಆರ್. ಪೇಟೆ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯದ ಜೋಡಿಕೊಲೆ ಪ್ರಕರಣ ಬೇಧಿಸಿದ ಪೊಲೀಸರು

By

Published : Aug 4, 2019, 10:06 AM IST

ಮಂಡ್ಯ:ರಾಯಸಮುದ್ರ ಗ್ರಾಮದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಕೆ.ಆರ್. ಪೇಟೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಗ್ರಾಮದ ಗುಂಡಣ್ಣ-ಲಲಿತಮ್ಮ ದಂಪತಿಯ ಹತ್ಯೆ ಪ್ರಕರಣ ಸಂಬಂಧ ಪಕ್ಕದ ಮನೆಯ ನಿವಾಸಿ ಯೋಗೇಶನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಡ್ಯದ ಜೋಡಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆ ಮಾಡಿರುವುದಾಗಿ ಯೋಗೇಶ್ ಒಪ್ಪಿಕೊಂಡಿದ್ದಾನೆ ಎಂದು ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದರು‌.

ABOUT THE AUTHOR

...view details