ಮಂಡ್ಯ: ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ತಹಶೀಲ್ದಾರ್ ರೂಪ ನಡುವೆ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಸದಸ್ಯತ್ವ ರದ್ದತಿಗೆ ಶಿಫಾರಸ್ಸು ಮಾಡುವಂತೆ ಸಂವಿಧಾನ ವಿಶ್ಲೇಷಕ ಡಾ.ಸುಧಾಕರ್ ಹೊಸಹಳ್ಳಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಹಶೀಲ್ದಾರ್ಗೆ ರಕ್ಷಣೆ ಒದಗಿಸುವಂತೆ ಹಾಗೂ ಶಾಸಕರ ಸದಸ್ಯತ್ವ ರದ್ದು ಮಾಡುವಂತೆ ಸಭಾಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಸಂವಿಧಾನ ವಿಶ್ಲೇಷಕ ಡಾ.ಸುಧಾಕರ್ ಹೊಸಹಳ್ಳಿ ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿಯಲ್ಲಿ ನಡೆದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ನಡೆದಿದ್ದ ಘಟನೆಯಲ್ಲಿ ಉಸ್ತುವಾರಿ ಸಚಿವರ ಎದುರು ಒಬ್ಬ ತಹಶೀಲ್ದಾರ್ರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಸರಿಯಲ್ಲ. ಒಬ್ಬ ಸರ್ಕಾರಿ ಅಧಿಕಾರಿಗಳ ಮೇಲೆ ಶಾಸಕರು ದೌರ್ಜನ್ಯ ನಡೆಸಿ, ಕೊಲೆ ಬೆದರಿಗೆ ಹಾಕಿದ್ದಾರೆ ಎಂದು ಆರೋಪಿಸಿದರು.
ಶಾಸಕ ರವೀಂದ್ರ ಶ್ರೀಕಂಠಯ್ಯ ಗೂಂಡಾ ವರ್ತನೆ ತೋರಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿ ಸಂವಿಧಾನ ನಿಯಮ ಉಲ್ಲಂಘನೆ ಮಾಡಿದ್ದಾರೆ. ಮಹಿಳಾ ಅಧಿಕಾರಿಯ ರಕ್ಷಣೆ, ಸಂವಿಧಾನದ ಆಶಯಗಳನ್ನು ಉಳಿಸಲು ಶಾಸಕರ ಸದಸ್ಯತ್ವವನ್ನ ರದ್ದುಪಡಿಸಲು ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಜೊತೆಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸುಧಾಕರ್ ಹೊಸಹಳ್ಳಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ನಿಷ್ಠೆ ಬಿಟ್ಟಿದ್ದರೆ ನಿಮಗಿಂತ ಮೊದಲೇ ನಾನು ಸಚಿವನಾಗುತ್ತಿದ್ದೆ : ಶಾಸಕ-ಸಚಿವರ ಮಧ್ಯೆ ವಾಕ್ಸಮರ